ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಬ್ಬಿನ ತಾಲ್ಲೂಕಿನ ಬಿದರೆಹಳ್ಳಿ ಕಾವಲ್ ಗ್ರಾಮದ ಹೆಚ್‍ಎಎಲ್ ಘಟಕದಲ್ಲಿ ಆಯೋಜಿಸಿರುವ “ಹೆಚ್‍ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆ”, “ಜಲ್‍ಜೀವನ್ ಮಿಷನ್ ಯೋಜನೆಯ ಕಾಮಗಾರಿ” ಹಾಗೂ “ತುಮಕೂರು ಇಂಡಸ್ಟ್ರಿಯಲ್ ಕಾರಿಕಾರ್ ಯೋಜನೆ ಹಂತ-ಎ”ರ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮತ್ತಿತರರು ಉಪಸ್ಥಿತರಿದ್ದರು.