ಬೆಂಗಳೂರು: ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮ ಹೃದಯಾಘಾತದಿಂದ ಇಂದು ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಿ.ಕೆ.ಎಸ್. ವರ್ಮ ಅವರಿಗೆ 76 ವರ್ಷ ವಯಸ್ಸಾಗಿತ್ತು. ಪತ್ನಿ ಶಾಂತ ವರ್ಮ ಹಾಗೂ ಮೂರು ಮಕ್ಕಳನ್ನು ಅವರು ಅಗಲಿದ್ದಾರೆ. ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ಅವರು ತೈಲವರ್ಣದಲ್ಲಿ ಚಿತ್ರ ಬಿಡಿಸುತ್ತಿದ್ದರು. ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ, ಪೂಜೆಯಲ್ಲಿ ಮೈಮರೆತ ರಾಘವೇಂದ್ರ ಸ್ವಾಮಿ, ಈಶ್ವರನ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿದ್ದವು. ವರನಟ ಡಾ.ರಾಜಕುಮಾರ್ ಅವರ ಭಾವಚಿತ್ರವನ್ನು ಸಹ ಬಿಡಿಸಿದ್ದರು. ಪರಿಸರ ಆಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರವನ್ನು ರಚಿಸುತ್ತಿದ್ದರು.